Welcome To Savi Savi Nenapu

Naveen Chinthakaaya

Wednesday, August 1, 2012

ಕದಂಬ Kadamba

'ಕದಂಬ'
 
 
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.

ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು. ರಾಜಾ ಕಾಕುಸ್ಥವರ್ಮನ ಕಾಲದಲ್ಲಿ ಉಛ್ಛ್ರಾಯ ಸ್ಥಿತಿಯಲ್ಲಿದ್ದ ಕದಂಬರ ರಾಜ್ಯ ಕರ್ನಾಟಕದ ಅನೇಕ ಭಾಗಗಳನ್ನೊಳಗೊಂಡಿತ್ತು. ಕದಂಬರ ಪೂರ್ವದ ರಾಜ ವಂಶಗಳಾದ ಮೌರ್ಯರು, ಶಾತವಾಹನರು ಮೂಲತಃ ಕರ್ನಾಟಕದ ಹೊರಗಿನವರಾಗಿದ್ದು, ಅವರ ರಾಜ್ಯದ ಕೇಂದ್ರಬಿಂದು ಕರ್ನಾಟಕದ ಹೊರಗಿತ್ತು. ಕನ್ನಡವನ್ನು ರಾಜ್ಯಭಾಷೆಯಾಗಿ ಬಳಸಿದ ಪ್ರಪ್ರಥಮ ರಾಜವಂಶ ಕದಂಬರು. ಈ ಪ್ರದೇಶದ ಬೆಳವಣಿಗೆಯ ಅಧ್ಯಯನದಲ್ಲಿ , ಬಹಳ ಕಾಲ ಬಾಳಿದ ಸ್ಥಳೀಯ ರಾಜಕೀಯ ಶಕ್ತಿಯಾಗಿ ಮತ್ತು ಕನ್ನಡ ಒಂದು ಪ್ರಮುಖ ಪ್ರಾದೇಶಿಕ ಭಾಷೆಯಾಗಿ ಬೆಳೆದ ಈ ಕಾಲಮಾನ, ಕರ್ನಾಟಕದ ಇತಿಹಾಸದಲ್ಲಿ,ಸರಿಸುಮಾರು ಐತಿಹಾಸಿಕ ಪ್ರಾರಂಭ ಕಾಲವಾಗಿದೆ. ಕ್ರಿ.ಶ. ೩೪೫ರಲ್ಲಿ ಮಯೂರಶರ್ಮನಿಂದ ಸ್ಥಾಪಿಸಲಾದ ಈ ರಾಜ್ಯವು, ಬೃಹತ್ ಸಾಮ್ರಾಜ್ಯವಾಗಿ ಬೆಳೆಯುವ ಲಕ್ಷಣವನ್ನು ಆಗಾಗ ತೋರಿಸುತ್ತಿತ್ತು. ಆಗಿನ ರಾಜರುಗಳ ಬಿರುದು ಬಾವಲಿಗಳೂ ಈ ವಿಷಯಕ್ಕೆ ಪುಷ್ಟಿ ಕೊಡುತ್ತವೆ.ಇದೇ ವಂಶದ ಕಾಕುಸ್ಥವರ್ಮನು ಬಲಾಢ್ಯ ಅರಸನಾಗಿದ್ದು, ಉತ್ತರದ ಗುಪ್ತ ಮಹಾಸಾಮ್ರಾಜ್ಯದ ದೊರೆಗಳು ಇವನೊಂದಿಗೆ ಲಗ್ನ ಸಂಬಂಧ ಇಟ್ಟುಕೊಂಡದ್ದು ಈ ರಾಜ್ಯದ ಘನತೆಯನ್ನು ಸೂಚಿಸುತ್ತದೆ. ಇದೇ ಪೀಳಿಗೆಯ ರಾಜ ಶಿವಕೋಟಿ ಪದೇಪದೇ ನಡೆಯುತ್ತಿದ್ದ ಯುದ್ಧ , ರಕ್ತಪಾತಗಳಿಂದ ಬೇಸತ್ತು ಜೈನ ಧರ್ಮಕ್ಕೆ ಮತಾಂತರಗೊಂಡ.ಕದಂಬರು, ಹಾಗೂ ಅವರ ಸಮಕಾಲೀನರಾಗಿದ್ದ ತಲಕಾಡು ಪಶ್ಚಿಮ ಗಂಗರು ಸಂಪೂರ್ಣ ಸ್ವತಂತ್ರ ರಾಜ್ಯಸ್ಥಾಪನೆ ಮಾಡಿದ ಸ್ಥಳೀಯರಲ್ಲಿ ಮೊದಲಿಗರು.


--
http://i33.tinypic.com/xdxsvl.jpg

 
NaveenChinthakaaya - Creative Guy.......
http://chinthakaaya.blogspot.com/
http://cid-f2be635aeac89a38.skydrive.live.com/browse.aspx/.Public


'Argument wins the situations but loses the person. So when arguing with your loved ones, remember that situations are not more important than your loved ones...'

No comments:

Post a Comment